ಬೆಳಗಾವಿ: ಬೈಕ್ ಮತ್ತು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಘಟನೆ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಸಿದ್ದಪ್ಪ ಮಲ್ಲೂರ (11) ಹಾಗೂ ಶಿವಪ್ಪ ಬಸವಂತಗೌಡ ಮಲ್ಲೂರ (46) ಮೃತ ದುರ್ದೈವಿಗಳು. ಮತ್ತೊಬ್ಬ ಸವಾರ ವೀರಣ್ಣ ಚನ್ನಬಸಪ್ಪ ಬಗನಾಳ (32) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿದ್ದ ಕಾರು, ಬೆಳವಡಿಯಿಂದ ಬೈಲಹೊಂಗಲ ಕಡೆಗೆ ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಮತ್ತು ಕಾರು ನಜ್ಜುಗುಜ್ಜಾಗಿದೆ. ಸಂದೀಪ ಸ್ಥಳದಲ್ಲೇ ಸಾವನ್ನಪ್ಪಿದರೆ, ಶಿವಪ್ಪ ಬೆಳಗಾವಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಬೆಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/07/2022 12:14 pm