ಉತ್ತರ ಪ್ರದೇಶ : ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ ಪ್ರೆಸ್ ವೇನಲ್ಲಿ ಎರಡು ಡಬಲ್ ಡೆಕ್ಕರ್ ಖಾಸಗಿ ಬಸ್ ಗಳ ಮಧ್ಯೆ ಡಿಕ್ಕಿ ಸಂಭವಿಸಿ 8 ಜನ ಸಾವನ್ನಪ್ಪಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.ವರದಿಗಳ ಪ್ರಕಾರ ದೆಹಲಿ ಮತ್ತು ಬಿಹಾರದಿಂದ ಬರುತ್ತಿದ್ದ ಬಸ್ಸುಗಳ ನಡುವೆ ಡಿಕ್ಕಿಯಾಗಿದೆ. ಗಾಯಗೊಂಡವರನ್ನ ಲಖನೌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬರಬಂಕಿ ಪೊಲೀಸರು ದೌಡಾಯಿಸಿದ್ದಾರೆ. ದುರ್ಘಟನೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕಂಬನಿ ಮಿಡಿದಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
PublicNext
25/07/2022 10:34 am