ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೋಲ್ ಬೂತ್‌ಗೆ ಟ್ರಕ್ ಡಿಕ್ಕಿ; ತಪ್ಪಿದ ಭಾರಿ ದುರಂತ.!

ಡೆಹ್ರಾಡೂನ್‌: ವೇಗವಾಗಿ ಬಂದ ಟ್ರಕ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಬೂತ್‌ ಡಿಕ್ಕಿ ಹೊಡೆದ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದೆ.

ಜುಲೈ 23ರಂದು ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ನಂತರ ಟ್ರಕ್ ಟೋಲ್ ಬೂತ್‌ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಈ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಪಘಾತ ಸಂಭವಿಸಿದ ಕೆಲವೇ ಸೆಕೆಂಡುಗಳ ನಂತರ ಮಹಿಳೆಯೊಬ್ಬರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲು ಟೋಲ್ ಬೂತ್ ಕಡೆಗೆ ಓಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಅಪಘಾತದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : Vijay Kumar
PublicNext

PublicNext

25/07/2022 06:07 pm

Cinque Terre

44.24 K

Cinque Terre

0

ಸಂಬಂಧಿತ ಸುದ್ದಿ