ಕಲಬುರಗಿ: ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರೋ ಆಹಾರ ಸೇವಿಸಿ 30ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರೋ ಘಟನೆ ಅಫಜಲಪುರ ತಾಲ್ಲೂಕಿನ ಹಾವನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.ಸದ್ಯ 10ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಮಕ್ಕಳನ್ನು ಗಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ದುರ್ಘಟನೆ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
27/07/2022 08:41 pm