ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ:ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ರೈತ ಸಾವು!

ವರದಿ- ಈರನಗೌಡ ಪಾಟೀಲ

ಹಾವೇರಿ: ಭತ್ತದ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು 26 ವರ್ಷದ ನಾಗರಾಜ ತೋಟದ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಭತ್ತ ನಾಟಿ ಮಾಡಲು ಟ್ರ್ಯಾಕ್ಟರ್‌ನಿಂದ ಭೂಮಿ ಸಜ್ಜುಗೊಳಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಘಟನೆ ನಡೆಯುತ್ತಿದ್ದಂತೆ ಅಕ್ಕ-ಪಕ್ಕ ಜಮೀನಿನಲ್ಲಿದ್ದ ರೈತರು ರಕ್ಷಣೆ ಮಾಡಲು ಧಾವಿಸಿದ್ದರು. ಆದರೆ ಅಷ್ಟರಲ್ಲಿ ರೈತನ ದೇಹ ಕೆಸರಿನಲ್ಲಿ ಸಿಲುಕಿದ್ದರಿಂದ ಉಸಿರುಗಟ್ಟಿ ಪ್ರಾಣಪಕ್ಷಿ ಹಾರಿಹೋಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನಾಗರಾಜ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ರಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Edited By : Nagesh Gaonkar
PublicNext

PublicNext

01/08/2022 02:47 pm

Cinque Terre

41.9 K

Cinque Terre

0

ಸಂಬಂಧಿತ ಸುದ್ದಿ