ಬಾಗಲಕೋಟೆ: ವಿರೋಧ ಪಕ್ಷದ ನಾಯಕ ಸಿದ್ದರಾಯ್ಯನವರ 75ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಸರ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ನಡೆದಿದೆ.
ಸಿದ್ದರಾಮೋತ್ಸವಕ್ಕೆಂದು ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಪ್ರಕಾಶ್ ಕಂಬಾರ (35) ಮೃತಪಟ್ಟಿದ್ದು, ಮತ್ತೆ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ. ಮೃತ ವ್ಯಕ್ತಿಯು ಬೀಳಗಿ ತಾಲ್ಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
PublicNext
02/08/2022 09:49 pm