ಅಥಣಿ : ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೋಕಟನೂರ ಗ್ರಾಮದಲ್ಲಿ ಬ್ರೇಕ್ ಫೇಲಾಗಿ ಬಸ್ ವೊಂದು ಹಳ್ಳಕ್ಕೆ ಬಿದ್ದಿದೆ.
ಇನ್ನು ಅಥಣಿ ಘಟಕಕ್ಕೆ ಸೇರಿದ ಬಸ್ ಮಧ್ಯಾಹ್ನ ಅಥಣಿ-ಜಮಖಂಡಿ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಹಳ್ಳಕ್ಕೆ ಜಾರಿದೆ. ಬಸ್ ನಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ.
ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗಳಾದ ಪ್ರಯಾಣಿಕರನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
PublicNext
04/08/2022 03:22 pm