ಕೋಲಾರ: ಟ್ರ್ಯಾಕ್ಟರ್ ಹಾಗೂ ಖಾಸಗಿ ಬಸ್ ಡಿಕ್ಕಿ ಆಗಿದೆ. ಇದರ ಪರಿಣಾಮ ಒಬ್ಬ ಸ್ಥಳದಲ್ಲಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ಪಲ್ಟಿ ಹೊಡೆದಿದ್ದು,ಈ ಘಟನೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ.
ಮೃತದುರ್ದೈವಿಯನ್ನ ಜಮೀರ್ ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರ್ ಹಾಗೂ ಖಾಸಗಿ ಬಸ್ ಕರ್ನಾಟಕದಿಂದ ಆಂಧ್ರಪ್ರದೇಶದ ಮನದಪಲ್ಲಿಗೆ ಹೋಗುವ ಸಮಯದಲ್ಲಿಯೇ ಈ ಘಟನೆ ಸಂಭವಿಸಿದೆ.
ಈ ಘಟನೆಯಿಂದ ಬಸ್ ನಲ್ಲಿದ್ದ 20 ಜನ ಗಂಭೀರಗಾಯಗೊಂಡಿದ್ದಾರೆ. ಆ ಕೂಡಲೇ ಇವರನ್ನ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರಾಯಲ್ಪಾಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
07/08/2022 01:00 pm