ತಿಪಟೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಜ್ವ ಗೊಂಡನಹಳ್ಳಿ ಹತ್ತಿರ ಮಂಗಳವಾರ ರಾತ್ರಿ 11.30 ಗಂಟೆ ಸುಮಾರಿಗೆ ಸುಮಾರಿಗೆ ಕೆಎಸ್‌ಆರ್‌ಟಿಸಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಹಾಸನ ಮೂಲದ ವ್ಯಕ್ತಿ ಹರ್ಷತ್ ಖಾನ್(21) ಗಂಭೀರವಾಗಿ ಗಾಯಗೊಂಡು ತುಮಕೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
PublicNext
10/08/2022 11:55 am