ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಮುನಾ ನದಿಯಲ್ಲಿ ದೋಣಿ ಮುಳುಗಿ 20 ಜನ ದುರ್ಮರಣ

ಲಕ್ನೋ: 35ಕ್ಕೂ ಹೆಚ್ಚು ಜನರಿದ್ದ ದೋಣಿಯು ಯಮುನಾ ನದಿಯಲ್ಲಿ ಮುಳುಗಿ 20 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ.

ದೋಣಿಯಲ್ಲಿ ಬಾದಾದ ಮರಕಾ ಘಾಟ್‌ನಿಂದ ಪತೇಪುರ್ ತಲುಪಲು ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ದೋಣಿಯಲ್ಲಿ ಮಹಿಳೆಯರು, ಪುರುಷರು ಮತ್ತು ಮಕ್ಕಳು ಸೇರಿದಂತೆ 35ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಮುಳುಗು ತಜ್ಞರು ದೌಡಾಯಿಸಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಈವರೆಗೆ 20 ಶವಗಳನ್ನು ಹೊರತೆಗೆಯಲಾಗಿದೆ. ಅದರಲ್ಲಿ ಇಬ್ಬರು ಈಜು ಪರಿಣತರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.

ತುರ್ತು ಕಾರ್ಯ ಕೈಗೊಳ್ಳುವಂತೆ ಯೋಗಿ ಆದಿತ್ಯನಾಥ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಇನ್ನು ಜನರನ್ನು ರಕ್ಷಿಸಲು ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ನೈಬ್ ತಹಶೀಲ್ದಾರ್ ತಿಳಿಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ, ಡಿಐಜಿ, ಎಸ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

Edited By : Vijay Kumar
PublicNext

PublicNext

11/08/2022 06:32 pm

Cinque Terre

89.86 K

Cinque Terre

2

ಸಂಬಂಧಿತ ಸುದ್ದಿ