ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಕರ ಕಾರು ಅಪಘಾತ: ಮಾಜಿ ಸಚಿವ ವಿನಾಯಕ್ ಮೇಟೆ ನಿಧನ

ಮುಂಬೈ: ಇಂದು ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ.ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಪನ್ವೇಲ್ ಬಳಿಯ ಮಂದಪ್ ಸುರಂಗದ ಬಳಿ ಮೇಟೆ ಅವರ ಎಸ್ ಯುವಿ ಕಾರು ಅಪಘಾತಕ್ಕೀಡಾಗಿದ್ದು, ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಮರಾಠಾ ಮೀಸಲಾತಿ ಕುರಿತು ಚರ್ಚೆಗಾಗಿ ಇವರು ಮುಂಬೈಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತವಾಗಿದೆ. ಅಪಘಾತದಲ್ಲಿ ಭದ್ರತಾ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ವಿನಾಯಕ್ ಮೇಟೆ ಅವರ ತಲೆ, ಕುತ್ತಿಗೆ, ಕೈಕಾಲುಗಳಿಗೆ ಗಂಭೀರವಾಗಿ ಗಾಯಗಳಾಗಿತ್ತು. ಕೂಡಲೇ ಅವರನ್ನು ಎಂಜಿಎಂ (ಮಹಾತ್ಮ ಗಾಂಧಿ ಮಿಷನ್) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪನ್ವೇಲ್ ನ ಎಂಜಿಎಂ ಆಸ್ಪತ್ರೆಗೆ ಆಗಮಿಸಿದ್ದರು.

Edited By : Nirmala Aralikatti
PublicNext

PublicNext

14/08/2022 11:57 am

Cinque Terre

38.91 K

Cinque Terre

0