ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಕರ ರಸ್ತೆ ಅಪಘಾತ: ಆಂಧ್ರದಲ್ಲಿ ಬೆಂಗಳೂರಿನ ತಾಯಿ-ಮಗ ಸಾವು, ತಂದೆ-ಮಗಳ ಸ್ಥಿತಿ ಗಂಭೀರ

ಅಮರಾವತಿ: ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ತಾಯಿ ಮತ್ತು ಆಕೆಯ ಮೂವರು ವರ್ಷದ ಮಗ ಮೃತಪಟ್ಟ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಇನ್ನು ಕಾರಿನಲ್ಲಿದ್ದ ತಂದೆ ಮತ್ತು ಮಗಳು ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿತ್ತೂರು ಜಿಲ್ಲೆಯ ಗಂಗಾವರಂ ಸಮೀಪ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಗಾಯತ್ರಿ (30) ಮತ್ತು ಮಗ ವಿಥುನ್ (3) ಎಂದು ಗುರುತಿಸಲಾಗಿದೆ. ವೆಲ್ಲೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಟೈರ್ ಪಂಕ್ಚರ್ ಆಗಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಗಾಯಾಳು ತಂದೆ ಮತ್ತು ಮಗಳನ್ನು ಪಲಮನೇರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
PublicNext

PublicNext

14/08/2022 07:03 pm

Cinque Terre

29.06 K

Cinque Terre

0

ಸಂಬಂಧಿತ ಸುದ್ದಿ