ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಟ್ರಕ್; ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರ ಸಾವು.!

ಲಕ್ನೋ: ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಮನೆಯೊಂದಕ್ಕೆ ನುಗ್ಗಿದ ಪರಿಣಾಮ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಸಾವನ್ನಪ್ಪಿದ ಭೀಕರ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಒಬ್ಬ ವ್ಯಕ್ತಿ ಇನ್ನೂ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.

ಕುರವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಟಿ ರಸ್ತೆಯಲ್ಲಿರುವ ಖಿರಿಯಾ ಪೀಪಲ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೈನ್‌ಪುರಿ ಎಸ್‌ಪಿ ಕಮಲೇಶ್ ದೀಕ್ಷಿತ್, 'ಮೈನ್‌ಪುರಿ ರಸ್ತೆಯಲ್ಲಿರುವ ಮನೆಯೊಂದಕ್ಕೆ ಟ್ರಕ್ ನುಗ್ಗಿದೆ. ಈ ದುರ್ಘಟನೆಯಲ್ಲಿ ನಿವೃತ್ತ ಸಬ್‌ ಇನ್‌ಸ್ಪೆಕ್ಟರ್ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದಾರೆ. ಇನ್ನು ಟ್ರಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಒಬ್ಬರು ಇನ್ನೂ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.

Edited By : Vijay Kumar
PublicNext

PublicNext

16/08/2022 09:18 am

Cinque Terre

85.15 K

Cinque Terre

1

ಸಂಬಂಧಿತ ಸುದ್ದಿ