ಮುಂಬೈ: ಮಹಾರಾಷ್ಟ್ರದ ಗೊಂಡಿಯಾದಲ್ಲಿ ರೈಲೊಂದರ 3 ಬೋಗಿಗಳು ಹಳಿತಪ್ಪಿದ ಪರಿಣಾಮ 50 ಜನ ಪ್ರಯಾಣಕರು ಗಾಯಗೊಂಡಿರುವ ಘಟನೆ ನಡೆದಿದೆ. ಪ್ಯಾಸೆಂಜರ್ ರೈಲು ಹಾಗೂ ಸರಕು ಸಾಗಣೆ ರೈಲಿನ ನಡುವೆ ಡಿಕ್ಕಿ ಸಂಭವಿಸಿ 50 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪಘಾತದ ರಭಸಕ್ಕೆ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಛತ್ತೀಸ್ ಗಢದ ಬಿಲಾಸ್ ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಪ್ಯಾಸೆಂಜರ್ ರೈಲು ಪ್ರಯಾಣ ಬೆಳೆಸಿತ್ತು. ಎರಡು ರೈಲುಗಳು ಒಂದೇ ಮಾರ್ಗದ ಹಳಿಯಲ್ಲಿ ಬಂದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ.
ಗ್ರೀನ್ ಸಿಗ್ನಲ್ ಸಿಕ್ಕ ಹಿನ್ನೆಲೆಯಲ್ಲಿ ಬಿಲಾಸ್ ಪುರ-ಭಗತ್ ಕಿಕೋಠಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲು ಪ್ರಯಾಣ ಬೆಳೆಸಿ, ಗೋಡಿಯಾ ತಲುಪಿದ ವೇಳೆ ಹಳಿಗಳ ಮೇಳೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿದೆ. ಸರಿಯಾಗಿ ಸಿಗ್ನಲ್ ಲಭ್ಯವಾಗದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
PublicNext
17/08/2022 02:49 pm