ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ; ಒಂದೇ ಕುಟುಂಬದ ನಾಲ್ವರ ದುರ್ಮರಣ

ನವದೆಹಲಿ: ನಿಂತಿದ್ದ ಟ್ರಕ್‌ಗೆ ಎಸ್‌ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ (ಡಿಎಂಇ) ನಲ್ಲಿ ನಡೆದಿದೆ.

ಮೃತರನ್ನು ಸುಮಿತ್ (34), ಯಾಗಿತ್ (7), ತೇಜ್‌ಪಾಲ್ (48) ಮತ್ತು ಅವರ ಪತ್ನಿ ಬಬ್ಲಿ (40) ಎಂದು ಗುರುತಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕುಶಾಲಿಯಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸಾವನ್ನಪ್ಪಿದ್ದರೆ, 10 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ಟ್ರಕ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Edited By : Vijay Kumar
PublicNext

PublicNext

19/08/2022 08:12 am

Cinque Terre

63.29 K

Cinque Terre

0

ಸಂಬಂಧಿತ ಸುದ್ದಿ