ಪಾವಗಡ :- ತಾಲೂಕಿನ ಉಪ್ಪಾರಹಳ್ಳಿ ಗೇಟ್ ಬಳಿ ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ ಶುಕ್ರವಾರ ಮಧ್ಯಾಹ್ನ ನಡೆದಿದೆ. ರಭಸವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ 8 ಜನ ಗಂಭೀರ ಗಾಯಗೊಂಡಿದ್ದು ಸ್ಥಳೀಯರ ಸಹಾಯದಿಂದ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದು ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ.
ವರದಿ:ರಾಘವೇಂದ್ರ ದಾಸರಹಳ್ಳಿ ಪಬ್ಲಿಕ್ ನೆಕ್ಸ್ಟ್
PublicNext
19/08/2022 03:18 pm