ತುಮಕೂರು : ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತಡರಾತ್ರಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಅಪರಿಚಿತ ವಾಹನ ಡಿಕ್ಕಿಹೊಡೆದು ಕಾರಿನಲ್ಲಿದ್ದ ತಂದೆ ಮಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶಿರಾ ತಾಲ್ಲೂಕು ತರೂರ್ ಗೇಟ್ ಬಳಿ ತಡರಾತ್ರಿ ನಡೆದಿದೆ.
ಶಿರಾ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಡವಿಗೆರೆ ಗ್ರಾಮದ ಅವಿನಾಶ್ (28) ಮಗಳು ಪ್ರಣಂತಿ(5) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಅವಿನಾಶ್ ಸಂಬಂಧಿಕರ ಮಗಳು ಸೌಮ್ಯ(4) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ.ಈ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/08/2022 01:37 pm