ಗದಗ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ರೋಣ ತಾಲೂಕಿನ ಕರ್ಕಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಶಿವು ಮಠದ (25), ಮತ್ತು ಇನ್ನೊರ್ವ ಬೈಕ್ ಸವಾರ ನಾಡಕಚೇರಿ ನೌಕರಸ್ಥ (45) ಎಂದು ತಿಳಿದು ಬಂದಿದ್ದು, ಇಬ್ಬರಿಗೂ ತಲೆ, ಮುಖ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ರೋಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
20/08/2022 10:18 pm