ಕೊರಟಗೆರೆ:- ತುಂಡಾದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಖ್ಯಾತಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಮನೆಯ ಹಿತ್ತಲಿನಲ್ಲಿ ಹಾಲು ಕರೆಯಲು ಹೋದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ವಿದ್ಯುತ್ ತಂತಿ ತುಳಿದು 32 ವರ್ಷದ ಮಹೇಶ್ ಮೃತಪಟ್ಟಿದ್ದಾರೆ. ರಾತ್ರಿಯಾದರೂ ಮನೆಗೆ ಬಾರದ ಮಹೇಶ್‌ಗಾಗಿ ಕುಟುಂಬಸ್ಥರು ಹುಡುಕಾಡಿ ನಂತರ ಮನೆಯ ಹಿತ್ತಲಿನಲ್ಲಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದು ಹಲವು ಗಂಟೆಗಳು ಸಂಭವಿಸಿದರು ಸಹ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಈ ಘಟನೆ ಸಂಭವಿಸಲು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪವನ್ನು ಸ್ಥಳೀಯರು ಮಾಡಿದ್ದಾರೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪಿಎಸ್ಐ ಮಹಾಲಕ್ಷ್ಮಮ್ಮ ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿ ಕೊಂಡಿದ್ದಾರೆ.
ವರದಿ ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್
PublicNext
23/08/2022 09:11 am