ತುಮಕೂರು: ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿ ಒಟ್ಟು 9 ಜನರು ಸಾವನ್ನಪ್ಪಿರುವ ಭೀಕರ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ.
ರಾಯಚೂರು ಜಿಲ್ಲೆಯ 20 ಜನರು ಕ್ರೂಸರ್ನಲ್ಲಿದ್ದರು ಎನ್ನಲಾಗುತ್ತಿದೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿ ಒಟ್ಟು 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 11 ಜನ ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತರ ಹೆಸರು ಊರಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಸಬ್ ಇನ್ಪೆಕ್ಟರ್, ಶಿರಾ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ.
PublicNext
25/08/2022 07:28 am