ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾವಗಡ : ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ತುಮಕೂರು : ಪಾವಗಡ ಪಟ್ಟಣದ ಚಳ್ಳಕೆರೆ ರಸ್ತೆಯಲ್ಲಿರುವಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಖಾಸಗಿ ಈಶ್ವರ್ ಎಸ್ ಎಂ ಎಂ ಎಸ್ ಎನ್ನುವ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.

ಇನ್ನು ಬೈಕ್ ಸವಾರನ ಎರಡು ಕಾಲುಗಳಿಗೆ ತೀವ್ರ ಪೆಟ್ಟಾಗಿದೆ. ಇನ್ನು ಬೈಕ್ ಸವಾರರನ್ನು ಕ್ಯಾತಗನಹಳ್ಳಿ ಗ್ರಾಮದ ಕೇಟಿ ನಾಗರಾಜಪ್ಪ ಎಂದು ಗುರುತಿಸಲಾಗಿದ್ದು ಬಸ್ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಗಾಯಾಳು ನಾಗರಾಜಪ್ಪ ಅವರನ್ನು ಆ್ಯಂಬುಲೆನ್ಸ್ ಮೂಲಕ ಕಾಲೇಜಿನ ವಿದ್ಯಾರ್ಥಿಗಳ ಸಹಕಾರದೊಂದಿಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಇನ್ನು ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್

Edited By : Manjunath H D
PublicNext

PublicNext

25/08/2022 10:49 pm

Cinque Terre

83.57 K

Cinque Terre

0

ಸಂಬಂಧಿತ ಸುದ್ದಿ