ಚಿತ್ರದುರ್ಗ: ಕಾರು ಮತ್ತು ಲಾರಿ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊರಹೊಲಯದ ರಾಷ್ಟ್ರೀಯ ಹೆದ್ದಾರಿ 48ರ ಸೀಬಾರ ಬಳಿ ಶುಕ್ರವಾರ ರಾತ್ರಿ 9:30ರ ಸುಮಾರಿಗೆ ನಡೆದಿದೆ.
ಮೃತರನ್ನು ಬೆಂಗಳೂರಿನ ರಾಜಾಜಿನಗರದ ಮನೀಶ್ (40) ಹಾಗೂ ಸಿಂಚನ(35) ಮತ್ತು ಭೂಮಿಕಾ ಎಂದು ಗುರುತಿಸಲಾಗಿದ್ದು, ಕಂಗುಮಠ, ಗಿರಿಧರ ಮತ್ತು ಆಶಾಕಿರಣ್ ಎಂಬುವರು ಗಾಯಗೊಂಡಿದ್ದಾರೆ. ಇವರೆಲ್ಲರೂ ಬೆಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ ಫಾರ್ಚೂನರ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಗಳೂರು ಮಾರ್ಗಕ್ಕೆ ತಿರುಗಿ, ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹಾಗೂ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
27/08/2022 03:14 pm