ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ಯಾಂಟರ್​​, ಬೋಲೆರೋ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಓರ್ವ ಚಾಲಕ ಸಾವು

ರಾಮನಗರ: ಕ್ಯಾಂಟರ್ ಹಾಗೂ ಬೋಲೆರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಮುರುಗ (30) ಮೃತ ದುರ್ದೈವಿ. ಬೋಲೆರೋ ಚಾಲಕ ಮಹೇಶ್ ಎಂಬುವವರಿಗೆ ಗಂಭೀರವಾಗಿ ಕಾಲಿಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು ಕಡೆಯಿಂದ ತೆಂಗಿನಕಾಯಿ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಹಾಗೂ ಚನ್ನಪಟ್ಟಣದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬೋಲೆರೋ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

28/08/2022 07:54 pm

Cinque Terre

24.86 K

Cinque Terre

0