ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಬಳಿ ನಡೆದಿದೆ.
ಈ ದುರ್ಘಟನೆಯಲ್ಲಿ ಲಕ್ಷ್ಮಣ್ ಸವದಿ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿಡಕಲ್ ಬಿಪಿಎಡ್ ಕಾಲೇಜಿನ ತಿರುವಿನಲ್ಲಿನ ಎದುರಿಗೆ ಬಂದ ಬೈಕ್ ತಪ್ಪಿಸಲು ಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಕಾರು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿ ಎಲ್ಲರನ್ನೂ ರಕ್ಷಣೆ ಮಾಡಿದ್ದಾರೆ.
PublicNext
31/08/2022 03:37 pm