ಬೆಳಗಾವಿ: ಮಳೆ ಸಿಡಿಲು ಬಡೆದು ಸ್ಥಳದಲ್ಲಿ ಯುವತಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ದಾದೇರಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಕವಿತಾ ಕರಿಕಟ್ಟಿ ಎಂಬ ಯುವತಿ ಬುಧವಾರ ಸಾಯಂಕಾಲ ತನ್ನ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳಿ ಬರುವಾಗ ಜೋರಾದ ಮಳೆ ಬರುವ ವೇಳೆ ಜೋರಾದ ಸಿಡಿಲು ಬಡೆದಿದ್ದರಿಂದ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಸವದತ್ತಿ ಪೊಲೀಸ್ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಈ ಘಟನೆಯ ಬಗ್ಗೆ ಅಸ್ವಾಭಾವಿಕ ಸಾವು ಎಂದು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
PublicNext
31/08/2022 06:58 pm