ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‌ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಬಳಿ ಸಂಭವಿಸಿದೆ.ಅಪಘಾತದಲ್ಲಿ ಸಾರಿಗೆ ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು 19 ಜನರು ಇದ್ದರು ಎಂದು ತಿಳಿದು ಬಂದಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಪ್ರಯಾಣಿಕರೊಬ್ಬರ ನಾಲಿಗೆ ಕಟ್ ಆಗಿದ್ದು, ಹಾಗೂ ಇನ್ನೊರ್ವ್ ವ್ಯಕ್ತಿಯ ಕೈ ಮುರಿದಿದೆ. ಮತ್ತು ಇನ್ನುಳಿದ ಒಟ್ಟು 8 ಜನರಿಗೆ ಸಣ್ಣ ಪುಟ್ಟ ಗಾಯಾಳುಗಳಾಗಿವೆ ಎಂದು ತಿಳಿದು ಬಂದಿದೆ. ಬಸ್ ಅಪಘಾತದ ಸುದ್ದಿ ತಿಳಿದ ಸ್ಥಳೀಯರು ಗಾಯಾಳುಗಳ ನೆರವಿಗೆ ಬಂದು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ.
PublicNext
01/09/2022 07:18 pm