ರಾಜಧಾನಿ ಲಕ್ನೋದಲ್ಲಿ ಹೋಟೆಲ್ ಲೆವಾನಾದಲ್ಲಿ ಇಂದು ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, 9 ಗಾಯಾಳುಗಳಿಗೆ ಸಿವಿಲ್ ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನಡೆಯುತ್ತಿದೆ. ಹೊಟೇಲ್‌ನಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಹೊಟೇಲ್‌ಗೆ ಬೆಂಕಿ ತಗುಲಿದ ಪರಿಣಾಮ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಸ್ಥಳಕ್ಕೆ ಹಲವು ಅಗ್ನಿಶಾಮಕ ದಳಗಳು ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಈ ಹೋಟೆಲ್ ಹಜರತ್‌ಗಂಜ್ ನಗರದ ವಿಐಪಿ ಪ್ರದೇಶದಲ್ಲಿದೆ. ಇನ್ನೂ 20ಕ್ಕೂ ಹೆಚ್ಚು ಮಂದಿ ಹೊಟೇಲ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೊಟೇಲ್‌ನ ಹೊರಗಿನ ಪ್ರತ್ಯಕ್ಷದರ್ಶಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳದ 15-20 ವಾಹನಗಳು ಸ್ಥಳದಲ್ಲೇ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಹೋಟೆಲ್ ಒಳಗೆ ಹೊಗೆ ಆವರಿಸಿದೆ. ಕೊಠಡಿಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಗ್ನಿಶಾಮಕ ದಳದ ತಂಡ ಹರಸಾಹಸ ಪಡುತ್ತಿದೆ.
PublicNext
05/09/2022 12:38 pm