ಕಾರವಾರ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ನಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿಂದೂವಾಡಾದ ದುರ್ಗಾದೇವಿ ದೇವಸ್ಥಾನದ ಬಳಿ ಇರ್ಪಾಗೆ ರಸ್ತೆಯಲ್ಲಿ ನಡೆದಿದೆ.
ತಾಲೂಕಿನ ದೇವಳಮಕ್ಕಿ ನಿವಾಸಿ ಪ್ರೇಮಾನಂದ ನಾಯ್ಕ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣ ಸ್ಥಳೀಯರ ನೆರವಿನೊಂದಿಗೆ ಕೈಗಾ ಎನ್.ಪಿ.ಸಿ.ಐ.ಎಲ್. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಆರೈಕೆ ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಕ್ರಿಮ್ಸ್ ಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಮಲ್ಲಾಪುರ ಠಾಣೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
PublicNext
07/09/2022 02:07 pm