ಮಂಡ್ಯ: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಬುರಾಯನಕೊಪ್ಪಲು ಮೈಸೂರು-ಬೆಂಗಳೂರು ಹೆದ್ದಾರಿಯ ಬಳಿ ನಡೆದಿದೆ.
ಬಾಬುರಾಯನಕೊಪ್ಪಲು ಗ್ರಾಮದ ನಿವಾಸಿ ರಿತೀಶ್ ಕುಮಾರ್ (26) ಮೃತ ದುರ್ದೈವಿ. ಕೆಲಸಕ್ಕೆಂದು ಹೋಗುತ್ತಿದ್ದಾಗ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ದುರ್ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
PublicNext
07/09/2022 02:50 pm