ಕಾರವಾರ: ಯಾದಗಿರಿ ಜಿಲ್ಲೆಯ ಶಹಾಪುರದ ಪ್ರಾರ್ಥನಾ ಪದವಿ & ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳು, ಉಪನ್ಯಾಸಕರು ಸೇರಿ ಒಟ್ಟೂ 60 ಮಂದಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ ಎಮ್.ಆರ್ ಟೂರ್ಸ್ & ಟ್ರಾವೆಲ್ಸ್ ಬಸ್ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಜೋಗದಿಂದ ಮುರ್ಡೇಶ್ವರಕ್ಕೆ ಬರುವಾಗ ಬುಧವಾರ ರಾತ್ರಿ ಸೂಳೆಮುರ್ಕಿ ತಿರುವಿನಲ್ಲಿ ಬಸ್ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕದಲ್ಲಿನ ತಗ್ಗಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಒಟ್ಟು 18 ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
PublicNext
08/09/2022 07:35 am