ಕಾರವಾರ: ಸಿದ್ದಾಪುರ ತಾಲೂಕಿನ ಸಿದ್ದಾಪುರ– ಸಾಗರ ರಾಜ್ಯ ಹೆದ್ದಾರಿಯ ಕವಂಚೂರು ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಆರು ಜನರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ವೃತ್ತಿಯಲ್ಲಿ ಸಾರಿಗೆ ಇಲಾಖೆ ನೌಕರನಾದ, ಭದ್ರಾವತಿ ಮೂಲದ ಚಾಲಕ ಸಾಧಿಕ್ ಮೌಲಾಸಾಬ್ ಸಾಗರ ಕಡೆಯಿಂದ ಸಿದ್ದಾಪುರ ಕಡೆಗೆ ಅತೀ ವೇಗವಾಗಿ ಹಾಗೂ ನಿರ್ಲಕ್ಷತನದಿಂದ ಕಾರನ್ನು ಚಲಾಯಿಸಿಕೊಂಡು ಬರುತ್ತಿದ್ದವನು, ಸಿದ್ದಾಪುರ–ಸಾಗರ ರಸ್ತೆಯ ಕವಂಚೂರು ಕ್ರಾಸ್ ಹತ್ತಿರ ಸಾಗರ ಕಡೆಗೆ ಹೋಗುತ್ತಿದ್ದ ಕಾರಿಗೆ ಮುಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ಹಾಗೂ ಕಾರಿನ ಚಾಲಕ ರಾಘವೇಂದ್ರ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿ, ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.
PublicNext
08/09/2022 05:39 pm