ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ:ತಪ್ಪಿದ ಬಾರಿ ಅನಾಹುತ

ಹುಬ್ಬಳ್ಳಿ: ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಮುಂದಿನ ಭಾಗ ಜಖಂಗೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿರುವ ಘಟನೆ ನವನಗರ ಬಳಿ ನಡೆದಿದೆ. ಹೌದು. ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಮುಂಭಾಗ ನುಜ್ಜುಗುಜ್ಜಾಗಿದ್ದು, ಅಪಘಾತ ಆಗುತ್ತಿದ್ದಂತೆಯೇ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತಿದ್ದಾಗ ಲಾರಿ ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಸ್ವಲ್ಪದರಲ್ಲೇ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.

Edited By : Nirmala Aralikatti
PublicNext

PublicNext

09/09/2022 03:47 pm

Cinque Terre

35.88 K

Cinque Terre

2

ಸಂಬಂಧಿತ ಸುದ್ದಿ