ರಾಯಪುರ: ನಿಂತಿದ್ದ ಟ್ರಕ್‌ಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ ಮತ್ತು ಮೂವರು ಗಾಯಗೊಂಡ ಭೀಕರ ಘಟನೆ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.
ಬಾಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮದಾಯಿ ಘಾಟ್‌ನಲ್ಲಿ ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್ ಕೊರ್ಬಾದಿಂದ ರಾಯಪುರಕ್ಕೆ ಹೋಗುತ್ತಿತ್ತು. ಈ ವೇಳೆ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯ ನಂತರ ಚಾಲಕನನ್ನು ಬಂಧಿಸಲಾಗಿದೆ ಎಂದು ಕೊರ್ಬಾದ ಪೊಲೀಸ್ ಅಧೀಕ್ಷಕ ಸಂತೋಷ್ ಸಿಂಗ್ ಹೇಳಿದ್ದಾರೆ.
PublicNext
12/09/2022 02:54 pm