ಭುವನೇಶ್ವರ : ಕಲ್ಲಿದ್ದಲು ತುಂಬಿದ್ದ ಟ್ರಕ್ ಹಾಗೂ ಖಾಸಗಿ ಕಂಪನಿಯೊಂದರ ನೌಕರರನ್ನು ಹೊತ್ತೊಯ್ಯುತ್ತಿದ್ದ ಬಸ್ ನುಡುವೆ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿ, 20 ಮಂದಿ ಗಾಯಗೊಂಡ ಘಟನೆ ಒಡಿಶಾದ ಝಾರ್ಸುಗುಡದಲ್ಲಿ ನಡೆದಿದೆ.ಸಂಬಲ್ ಪುರ-ಜಾರ್ಸುಗುಡ ಬಿಜು ಎಕ್ಸ್ ಪ್ರೆಸ್ ವೇನಲ್ಲಿ ಈ ಘಟನೆ ನಡೆದಿದ್ದು, ಕಾರ್ಮಿಕರು ಪ್ಲಾಂಟ್ ಸೈಟ್ ನಿಂದ ಝಾರ್ಸುಗುಡ ಪಟ್ಟಣಕ್ಕೆ ಬಸ್ ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಝಾರ್ಸುಗುಡ ಬೈಪಾಸ್ ರಸ್ತೆಯ ಪವರ್ ಹೌಸ್ ಚಾಕ್ ಬಳಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಹಲವಾರು ನೌಕರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ ಕಾರ್ಮಿಕರನ್ನು ಬುರ್ಲಾದಲ್ಲಿರುವ ವೀರ್ ಸುರೇಂದ್ರ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ವಿಮ್ಸಾರ್) ಗೆ ಸ್ಥಳಾಂತರಿಸಲಾಗಿದೆ ಎಂದು ಝಾರ್ಸುಗುಡಾ ಉಪ ಪೊಲೀಸ್ ವರಿಷ್ಠಾಧಿಕಾರಿ ಎನ್.ಮಹಾಪಾತ್ರ ತಿಳಿಸಿದ್ದಾರೆ.
PublicNext
17/09/2022 11:50 am