ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಟೂರಿಸ್ಟ್ ಟೆಂಪೋ ಟ್ರಾವೆಲರ್ ಕಂದಕಕ್ಕೆ ಬಿದ್ದು, 7 ಮಂದಿ ಸಾವನ್ನಪ್ಪಿದ್ದು 10 ಜನ ಗಾಯಗೊಂಡಿದ್ದಾರೆ.ಘಟನೆ ಹಿಮಾಚಲ ಪ್ರದೇಶದ ಕುಲುವಿನ ಜಲೋಡಿ ಪಾಸ್ ಬಳಿ ಈ ಘಟನೆ ನಡೆದಿದೆ. ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದು, ರಾತ್ರಿ 8:30ರ ಸುಮಾರಿಗೆ ದುರ್ಘಟನೆ ನಡೆದಿದೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಮಧ್ಯರಾತ್ರಿ ಸುಮಾರು 1:37ರ ಹೊತ್ತಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.
ವರದಿಗಳ ಪ್ರಕಾರ ಟೂರಿಸ್ಟ್ ವಾಹನದಲ್ಲಿದ್ದವರು ವಾರಣಾಸಿಯ ವಿದ್ಯಾರ್ಥಿಗಳಾಗಿದ್ದು, ಶೈಕ್ಷಣಿಕ ಪ್ರವಾಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಎಲ್ಲಾ ಗಾಯಾಳುಗಳಿಗೆ ಕುಲುವಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
PublicNext
26/09/2022 11:43 am