ಆಂಧ್ರಪ್ರದೇಶದ ತಿರುಪತಿ ಬಳಿಯ ಚಂದ್ರಗಿರಿ ಬೈಪಾಸ್ ರಸ್ತೆಯಲ್ಲಿ ಮರ್ಸಿಡೀಸ್ ಬೆಂಝ್ ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಎರಡು ಭಾಗವಾಗಿದೆ. ಟ್ರ್ಯಾಕ್ಟರ್ ರಾಂಗ್ ಸೈಡ್ ಗೆ ಬಂದು ಮರ್ಸಿಡಿಸ್ ಬೆಂಝ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಬೆಂಝ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರಾಕ್ಟರ್ ಎರಡು ತುಂಡಾಗಿದೆ.
ಈ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಅವರು ಇತ್ತೀಚೆಗೆ ಮರ್ಸಿಡಿಸ್ ಬೆಂಝ್ ಚಾಲನೆ ಮಾಡುತ್ತಿದ್ದ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಅಪಘಾತದ ನಂತರ, ಮರ್ಸಿಡಿಸ್ ಬೆಂಝ್ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಲಾಗಿತ್ತು.
ಸೈರಸ್ ಮಿಸ್ತ್ರಿ ಅವರ ಸಾವಿನ ನಂತರ ಬೆಂಜ್ ಕಾರುಗಳ ಸುರಕ್ಷತೆ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿದ್ದವು.ಆದರೆ ಇಂದು ನಡೆದ ಅಪಘಾತದಲ್ಲಿ ಬೆಂಝ್ ಕಾರಿಗೆ ಡಿಕ್ಕಿ ಹೊಡೆದ ಟ್ರಾಕ್ಟರ್ 2 ಭಾಗವಾಗಿರುವುದು ಆಶ್ಚರ್ಯ ಮೂಡಿಸಿದೆ.
PublicNext
27/09/2022 05:25 pm