ಲಕ್ನೋ: ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 8 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದೆ. ಇನ್ನು ಈ ದುರ್ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಲಖೀಂಪುರ ಖೇರಿ ಎಡಿಎಂ ಸಂಜಯ್ ಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ, ತಕ್ಷಣ ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.
PublicNext
28/09/2022 11:48 am