ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್: 27 ಭಕ್ತರ ದಾರುಣ ಸಾವು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಯಾಣಿಕರು ಇದ್ದ ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿದ ಪರಿಣಾಮ ಒಟ್ಟು 27 ಜನ ದಾರುಣವಾಗಿ ಮೃತಪಟ್ಟಿದ್ದಾರೆ‌.

ಮೃತರಲ್ಲಿ 11 ಜನ ಮಕ್ಕಳು, 11 ಮಂದಿ ಮಹಿಳೆಯರು ಸೇರಿದ್ದಾರೆ. ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ನಿನ್ನೆ ಶನಿವಾರ ತಡರಾತ್ರಿ ಈ ಭೀಕರ ದುರ್ಘಟನೆ ಸಂಭವಿಸಿದೆ. ಒಮ್ಮಿಂದೊಮ್ಮೆಲೇ ಟ್ರ್ಯಾಕ್ಟರ್ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಪರಿಣಾಮ ಸ್ಥಳದಲ್ಲೇ 27 ಜನ ಅಸುನೀಗಿದ್ದಾರೆ.

ಇನ್ನೂ ಹಲವರ ಸ್ಥಿತಿ ಚಿಂತಾಜನಕವಾಗಿದೆ‌. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

Edited By : Nagaraj Tulugeri
PublicNext

PublicNext

02/10/2022 08:08 am

Cinque Terre

93.05 K

Cinque Terre

2

ಸಂಬಂಧಿತ ಸುದ್ದಿ