ಡೆಹ್ರಾಡೂನ್: ಉತ್ತರಾಖಂಡದ ಪೌರಿ ಘರ್ ವಾಲ್ ಜಿಲ್ಲೆಯ ಸಿಮ್ ಡಿ ಗ್ರಾಮದ ಬಳಿ ರಿಖ್ನಿಖಾಲ್-ಬಿರೋಖಾಲ್ ರಸ್ತೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ.ಹೌದು ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಮರಿಗೆ ಬಿದ್ದಿದ್ದು ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದೆ. ಕಂದಕವು ಸುಮಾರು 500 ಮೀಟರ್ ಆಳವಿದ್ದು. ಸತ್ತವರ ಸಂಖ್ಯೆಗಳು ನಿಖರವಾಗಿ ತಿಳಿದುಬಂದಿಲ್ಲ.
ಈವರೆಗೆ 9 ಮಂದಿಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಪೈಕಿ 6 ಮಂದಿಯ ಆರೋಗ್ಯ ಸ್ಥಿತಿ ಗಂಭೀರ ಸ್ವರೂಪದಲ್ಲಿದೆ. 10 ಶವಗಳನ್ನು ಪತ್ತೆ ಮಾಡಲಾಗಿದ್ದು, 6 ಶವಗಳನ್ನು ಮೇಲಕ್ಕೆ ತರಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತದ ಸ್ಥಳಕ್ಕೆ ಅಗತ್ಯವಿರುವ ಪರಿಕರಗಳನ್ನು ರವಾನಿಸಲು, ಕೊಂಡೊಯ್ಯಲು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಅಕ್ಕಪಕ್ಕದ ಹಳ್ಳಿಗಳ ಜನರೂ ಅಧಿಕಾರಿಗಳಿಗೆ ಸಹಕರಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದರು.
PublicNext
05/10/2022 07:51 am