ಲಕ್ನೋ: ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 3ರಲ್ಲಿನ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಅನೇಕ ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ತಲುಪಿವೆ. ಮಾಡ್ಯುಲರ್ ಕಿಚನ್‌ಗಳಲ್ಲಿ ಬಳಸುವ ಪ್ಲಾಸ್ಟಿಕ್ ಟ್ರೇಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಹಾಗೂ ಫೋಟೋಗಳಲ್ಲಿ ದಟ್ಟವಾದ ಕಪ್ಪು ಹೊಗೆ ಹೊರಹೊಮ್ಮುತ್ತಿರುವುದನ್ನು ಕಾಣಬಹುದಾಗಿದೆ.
PublicNext
07/10/2022 06:11 pm