ನವದೆಹಲಿ: ದೆಹಲಿಯ ಹಲವೆಡೆ ಧಾರಾಕಾರವಾಗಿ ರಾಜಧಾನಿ ತತ್ತರಿಸಿ ಹೋಗಿದೆ. ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಈ ನಡುವೆ ನಿನ್ನೆ ಸಂಜೆ ನಡೆದ ಕಟ್ಟಡ ಕುಸಿತ ದುರಂತದಲ್ಲಿ ನಾಲ್ಕು ವರ್ಷದ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ. ದೆಹಲಿಯ ಲಾಹೋರಿ ಗೇಟ್ ಪ್ರದೇಶದಲ್ಲಿ ಬೃಹತ್ ಕಟ್ಟಡ ಕುಸಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಇನ್ನು ಕಟ್ಟಡದ ಅವಶೇಷಗಳಡಿ ನಾಲ್ವರು ಸಿಲುಕಿಕೋಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗ್ತಿದೆ.
ಸಂಜೆ 7.30ರ ಸುಮಾರಿಗೆ ವಿಷಯ ತಿಳಿಯುತ್ತಿದ್ದಂತೆ 8 ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿವೆ. ಸ್ಥಳದಲ್ಲಿ ದೆಹಲಿ ಪೊಲೀಸರು, ಅಗ್ನಿಶಾಮಕ ದಳ, ಎನ್ ಡಿಆರ್ ಎಫ್ ಸೇರಿದಂತೆ ಹಲವು ರಕ್ಷಣಾ ತಂಡಗಳಿಂದ ಸಿಲುಕಿದವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಇತ್ತ ಪಂಜಾಬ್ ನ ಮೊಹಾಲಿಯಲ್ಲೂ ದುರಂತವೊಂದು ನಡೆದಿದೆ. ಶಾಪಿಂಗ್ ಮಾಲ್ ನ ಗೋಡೆಯೊಂದು ಕುಸಿದುಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಗೋಡೆ ಕುಸಿಯುತ್ತದ್ದಂತೆ 8 ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದರು. ತಕ್ಷಣ ರಕ್ಷಣೆಗಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ನಾಲ್ವರನ್ನು ರಕ್ಷಿಸಿದ್ದಾರೆ.
PublicNext
10/10/2022 10:38 am