ದಾವಣಗೆರೆ : ವಿರೋಧದ ಮಧ್ಯೆಯೂ ಜಾರಿಯಾದ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4 ನ್ನು ಬಂದ್ ಮಾಡಿದ್ದಾರೆ.
ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರೈತ ಮುಖಂಡ ಹುಚ್ವವನಹಳ್ಳಿ ಮಂಜುನಾಥ ನೇತ್ರತ್ವದಲ್ಲಿ ಪ್ರತಿಭಟನೆ ಕಿಚ್ಚು ಹತ್ತಿದೆ.
ದಾವಣಗೆರೆ ನಗರದ ಜಿಲ್ಲಾ ಪಂಚಾಯತ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅನ್ನದಾತ ಆಕ್ರೋಶಗೊಂಡಿದ್ದಾರೆ.
PublicNext
25/09/2020 07:47 am