ನವದೆಹಲಿ : ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಅನ್ನದಾತರು ರಸ್ತೆಗಿಳಿದು ಹೋರಾಟ ಆರಂಭಿಸಿ ಇಂದಿಗೆ 17 ನೇ ದಿನ.
ಇಷ್ಟೇಲ್ಲಾ ಹೋರಾಟ ನಡೆಸುತ್ತಿದ್ದರು ಸರ್ಕಾರ ಮಾತ್ರ ಕ್ಯಾರೆ ಎನ್ನುತ್ತಿಲ್ಲ.
ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿರುವ ರೈತರು, ಸೋಮವಾರದಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
ರೈತರು ಹಾಗೂ ಸರಕಾರದ ಮಧ್ಯೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ದೆಹಲಿ ಹಾಗೂ ಹರಿಯಾಣ ಗಡಿ ಪ್ರದೇಶಗಳಲ್ಲಿ ಮತ್ತಷ್ಟು ರೈತರು ಒಗ್ಗೂಡುತ್ತಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬೆಂಬಲ ಸೂಚಕವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ.
ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ ಪ್ರತಿಭಟನೆ ನಿರತ ರೈತ ಪ್ರತಿಕ್ರಿಯಿಸುತ್ತಾ, ನಾವು ಕಬ್ಬಿನ ಟ್ರಾಲಿಗಳನ್ನು ಮಿಲ್ ಗಳಿಗೆ ಕೊಂಡೊಯ್ಯುವಾಗ, 24 ತಾಸು ಊಟವನ್ನು ಬಿಟ್ಟುಬಿಡುತ್ತೇನೆ.
ಈ ಉಪವಾಸಕ್ಕೆ ನಾವು ಸಿದ್ಧರಾಗಿದ್ದೇವೆ ಎಂದು ಹೇಳಿದರು.
PublicNext
14/12/2020 12:17 pm