ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಅನ್ನದಾತರು ನಿರಂತರ ಹೋರಾಟ ಮಾಡುತ್ತಿದ್ದಾರೆ ಈ ಹೋರಾಟಕ್ಕೆ ಹಾಲಿವುಡ್ ನಟಿ ರಿಹಾನ್ನಾ ಬೆಂಬಲ ಸೂಚಿಸಿರುವ ಬೆನ್ನಲ್ಲೇ ಇದೀಗ ಖ್ಯಾತ ಬಾಲ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ ಬರ್ಗ್ ಕೂಡ ರೈತರ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.
ಈ ಹಿಂದೆ ಭಾರತೀಯ ರೈತರ ಪ್ರತಿಭಟನೆ ಸುದ್ದಿಯನ್ನು ಟ್ವೀಟ್ ಮಾಡಿರುವ ಅಂತರರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ, ನಾವು ಈ ಬಗ್ಗೆ ಯಾಕೆ ಚರ್ಚಿಸುತ್ತಿಲ್ಲ ಎಂದು ಪ್ರಶ್ನಿಸಿದ್ದರು. ಪ್ರತಿಭಟನೆ ನಿರತ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂಬ ಸಿಎನ್ಎನ್ ಸುದ್ದಿಯನ್ನು ಟ್ವೀಟಿಸಿ ರಿಹಾನ್ನಾ #FarmersProtest ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಈ ಪ್ರಶ್ನೆ ಮಾಡಿದ್ದಾರೆ.
ರಿಹಾನ್ನಾ ಬೆನ್ನಲ್ಲೇ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ ಬರ್ಗ್ ಕೂಡ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದು, ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಗ್ರೇಟಾ ಟ್ವೀಟ್ ಮಾಡಿದ್ದಾರೆ. ಗ್ರೇಟಾ ಮತ್ತು ರಿಹಾನ್ನಾ ಅವರ ಟ್ವೀಟ್ ಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ- ವಿರೋಧ ಚರ್ಚೆಗಳು ನಡೆಯುತ್ತಿವೆ.
PublicNext
03/02/2021 06:35 pm