ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
ಯಾದಗಿರಿ: ಮಳೆರಾಯನ ಹೊಡೆತಕ್ಕೆ ರೈತರು ಬೆಳೆದ ಭತ್ತದ ಬೆಳೆ ನೆಲಕಚ್ಚಿ ಹೋಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ.
ಹೌದು.. ಬಿಟ್ಟು ಬಿಡದೇ ಸುರಿದ ಮಳೆಗೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕೃಷ್ಣಾಪುರದಲ್ಲಿ 26 ಎಕರೆ, ಬಿರನೂರಿನಲ್ಲಿ 15 ಎಕರೆ ಭತ್ತದ ಬೆಳೆ ಸಂಪೂರ್ಣ ನಾಶವಾಗಿ ಹೋಗಿದೆ.
ಇನ್ನು ರೈತರ ಜಮೀನುಗಳಿಗೆ ಇಂದು ಯಾದಗಿರಿ ಉಪ ಕೃಷಿ ನಿರ್ದೇಶಕ ಡಾ.ಬಾಲರಾಜ್ ರಂಗರಾವ್, ಸಹಾಯಕ ಕೃಷಿ ನಿರ್ದೇಶಕ ಗುರುನಾಥ , ಕೃಷಿ ಅಧಿಕಾರಿ ಡಾ.ಭೀಮರಾಯ ಹವಾಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈತರು ಕಷ್ಟಪಟ್ಟು ಬೆಳೆದ ಭತ್ತದ ಬೆಳೆ ಸಂಪೂರ್ಣ ನಾಶವಾಗಿದ್ದಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಅಗ್ರಹಿಸಿದ್ದಾರೆ.
PublicNext
27/11/2021 08:54 pm