ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಇದುವರೆಗೆ ಕಂಡು ಕೇಳರಿಯದ ದೊಡ್ಡ ಅನಾಹುತ ಭಾರತದಲ್ಲಿ ನಡೆಯಲಿದೆ: ಕೋಡಿ ಮಠ ಶ್ರೀಗಳ ಭವಿಷ್ಯ

ಹಾಸನ: ಮುಂಬರುವ ದಿನಗಳಲ್ಲಿ ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿಗಳು ಸಾವು, ಕೊಲೆ ನೋವುಗಳು ಹೆಚ್ಚಾಗಲಿವೆ. ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ರಾಜಕೀಯ ವಿಪ್ಲವವಾಗಿ, ಗುಂಪುಗಳಾಗುತ್ತವೆ. ಜಗತ್ತಿನ ಸಾಮ್ರಾಟರುಗಳು ತಲ್ಲಣಗೊಳ್ಳುತ್ತಾರೆ ಎಂದು ಹಾರನಹಳ್ಳಿ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ.

ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಅವರು ಘೋರ ಭವಿಷ್ಯ ಹೇಳಿದ್ದಾರೆ. ಈ ಬಾರಿ ಮುಂಗಾರು ಉತ್ತಮವಾಗಿ ಸುರಿಯಲಿದೆ. ಹಿಂಗಾರು ಕಡಿಮೆಯಾಗಲಿದೆ. ಭಾರತದಲ್ಲಿ ಇಲ್ಲಿಯವರೆಗೂ ಕಂಡೂ ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ. ವಿಶೇಷವಾಗಿ ಎಲೆಕ್ಟ್ರಿಕ್‌ನಿಂದ ಹೆಚ್ಚು ಅಪಾಯವಿದೆ. ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ. ಮಲೆನಾಡು ಬಯಲಾಗುತ್ತದೆ, ಬಯಲು ಮಲೆನಾಡಾಗುತ್ತದೆ. ಸಾವು ನೋವುಗಳು ಹೆಚ್ಚಾಗುತ್ತವೆ. ನಿರೀಕ್ಷಿತ ಪ್ರದೇಶದಲ್ಲಿ ಮಳೆ ಸರಿಯಾಗಿ ಆಗುವುದಿಲ್ಲ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.

Edited By : Manjunath H D
PublicNext

PublicNext

05/04/2022 02:03 pm

Cinque Terre

70.19 K

Cinque Terre

26