ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಗೊರವಪ್ಪನ ನಾಗಪ್ಪ ಉರ್ಮಿ 20 ಅಡಿ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ.ಇನ್ನು ಪ್ರತಿವರ್ಷವೂ ಕಾರ್ಣಿಕ (ಭವಿಷ್ಯ) ನುಡಿಯುತ್ತಾರೆ. ಅದು ಸತ್ಯವಾಗುತ್ತದೆ ಎಂದು ಜನ ನಂಬಿದ್ದಾರೆ.ಈ ವರ್ಷ ಅವರು ನುಡಿದ ಕಾರ್ಣಿಕ ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಎಂದಿದ್ದಾರೆ. ಈ ಕಾರ್ಣಿಕದ ಅರ್ಥವನ್ನು ದೇವಸ್ಥಾನದ ಪ್ರಧಾನ ಅರ್ಚಕ ಮಾಲತೇಶ ಭಟ್ ವಿಶ್ಲೇಷಿಸಿದರು.
‘ಸಣ್ಣಸಣ್ಣ ರೈತರಿಗೂ ಪ್ರಯೋಜನವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ’ ಎಂಬುದೇ ಇದರ ಅರ್ಥ ಎಂದು ಅವರು ಹೇಳಿದರು.
PublicNext
04/10/2022 08:16 pm