ಮೇಷ: ನ್ಯಾಯವಾದಿಗಳಿಗೆ, ಸ್ವಪ್ರಯತ್ನದಿಂದ ಕಾರ್ಯ ಕ್ಷೇತ್ರಗಳಲ್ಲಿ ಮುನ್ನಡೆ. ಮಕ್ಕಳಿಂದಲೇ ವಾದ-ವಿವಾದ ಗಳು ಹೆಚ್ಚಾಗಬಹುದು.
ವೃಷಭ: ಮುಕ್ತ ಭಾವನೆಯಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ. ಆಶ್ಚರ್ಯಕರ ರೀತಿಯಲ್ಲಿ ವಿರೋಧಿಗಳಿಂದಲೂ ಬೆಂಬಲ.
ಮಿಥುನ: ಹಿರಿಯರ ಸಲಹೆಗಳಿಂದ ಆಗಬಹುದಾಗಿದ್ದ ಸಾಕಷ್ಟು ನಷ್ಟವನ್ನು ತಪ್ಪಿಸಿಕೊಳ್ಳುವಿರಿ. ಮಕ್ಕಳ ಆರೋಗ್ಯದ ಗಮನ ಅಗತ್ಯ.
ಕಟಕ: ಪದೇಪದೇ ನಿರ್ಧಾರ ಬದಲಿಸುವ ನಡವಳಿಕೆ ಯಿಂದಾಗಿ ಕುಟುಂಬದಲ್ಲಿ ಅಸಹನೆ. ಕರಿದ ಪದಾರ್ಥ ವ್ಯಾಪಾರದಲ್ಲಿ ಅಧಿಕ ಲಾಭ.
ಸಿಂಹ: ಯಾವುದೇ ಆತುರದ ನಿರ್ಧಾರ ಬೇಡ. ಮಹಿಳೆಯರಿಗೆ ಕುಟುಂಬ ವ್ಯವಹಾರಗಳಲ್ಲಿ ತೃಪ್ತಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿ.
ಕನ್ಯಾ: ಸ್ನೇಹಿತರೊಂದಿಗೆ ಸಮಾಲೋಚಿಸಿ. ಸಾಲ ಮರುಪಾವತಿಸಿ ಗೌರವ ಉಳಿಸಿಕೊಳ್ಳುವಿರಿ. ವಸ್ತ್ರ ವ್ಯಾಪಾರಿಗಳಿಗೆ ಆದಾಯ ಹೆಚ್ಚಳ.
ತುಲಾ: ಸಂಪನ್ಮೂಲ ಕ್ರೋಡೀಕರಿಸಲು ಹಲವು ಪ್ರಯತ್ನಗಳನ್ನು ಮಾಡುವಿರಿ. ಕೃಷಿಕರಿಗೆ ಬೆಲೆ ಕುಸಿತದ ಆತಂಕ ಎದುರಾಗಬಹುದು.
ವೃಶ್ಚಿಕ: ಅನಿರೀಕ್ಷಿತ ಮೂಲಗಳಿಂದ ಆರ್ಥಿಕ ಸಹಾಯ ಸಾಧ್ಯತೆ. ಬಾಹ್ಯಾಕಾಶ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ಬಡ್ತಿ ಸಾಧ್ಯತೆ.
ಧನುಸ್ಸು: ಕೆಲವೊಂದು ವಿಷಯಗಳಲ್ಲಿ ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಸ್ವಲ್ಪ ಸಮಾಧಾನ ಚಿತ್ತದಿಂದ ವ್ಯವಹರಿಸಿರಿ.
ಮಕರ: ಸತ್ಯಶೋಧನೆಯಿಂದ ತಲೆದೋರಿರುವ ಆಂತರಿಕ ಗೊಂದಲಗಳ ನಿವಾರಣೆ. ಹಣಕಾಸಿನ ವಿಷಯದಲ್ಲಿ ಜಾಗರೂಕತೆ ಅಗತ್ಯ.
ಕುಂಭ: ಕೃಷಿ ಯಂತ್ರಗಳನ್ನು ಹೊಂದಿರುವವರಿಗೆ ಬಾಡಿಗೆಯಿಂದ ಹೆಚ್ಚಿನ ಆದಾಯ. ಪ್ರೀತಿ-ಪ್ರೇಮದಲ್ಲಿ ಬಿದ್ದವರಿಗೆ ಹಿನ್ನಡೆಯಾಗಲಿದೆ.
ಮೀನ: ಸಾಮರ್ಥ್ಯವನ್ನು ಅರಿತು ಕೆಲಸ ಕಾರ್ಯಗಳನ್ನು ಆಯ್ಕೆಮಾಡಿಕೊಳ್ಳಿ. ಬಯಸಿದ್ದ ಸ್ಥಳಕ್ಕೆ ವರ್ಗಾವಣೆ ದೊರೆಯುವ ಸಾಧ್ಯತೆ.
PublicNext
24/06/2022 07:13 am