ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯ; ಶಾಸಕ ಚರಂತಿಮಠ

ಬಾಗಲಕೋಟೆ: ಶಿಕ್ಷಣದ ಜೊತೆಗೆ ಮಕ್ಕಳ ದೈಹಿಕ, ಮಾನಸಿಕ ಬೆಳೆವಣಿಗೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯವಾಗಿವೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟಗಳಿಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮಾನಸಿಕ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯವಾದರೆ, ದೈಹಿಕ ಬೆಳೆವಣ ಗೆಗೆ ಕ್ರೀಡೆಗಳು ಅವಶ್ಯವಾಗಿವೆ. ಈ ನಿಟ್ಟಿನಲ್ಲಿ ಭಾರತದ ಪ್ರಧಾನ ಮಂತ್ರಿಗಳು ಕಳೆದ 8 ವರ್ಷಗಳಿಂದ ಸತತವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.

ಇದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕ್ರೀಡಾಪಟುಗಳು ಕಂಚು, ಬೆಳ್ಳಿ ಹಾಗೂ ಬಂಗಾರದ ಪದಕಗಳನ್ನು ಪಡೆಯುವಂತಾಗಿದೆ ಎಂದರು.

ಪ್ರತಿಯೊಂದು ದೇಶದಲ್ಲಿ ಭಾರತದ ಕ್ರೀಡಾಪಟುಗಳು ಮಿಂಚುತ್ತಿದ್ದಾರೆ. ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಕ್ರೀಟಾಪಟುಗಳನ್ನು ತಯಾರು ಮಾಡಲಾಗುತ್ತಿದೆ. ದೇಶಿಯ ಕ್ರೀಡೆಗಳಾದ ಹಾಕಿ, ಖೋಖೋ, ಕಬಡ್ಡಿಗಳಿಗೆ ಹೆಚ್ಚಿನ ಅವಕಾಶ ಇಲಾಖೆ ಕಲ್ಪಿಸಿಕೊಟ್ಟಿದೆ.

ತಮ್ಮ ವ್ಯಕ್ತಿತ್ವವನ್ನು ಪ್ರದರ್ಶನ ಮಾಡುವಂತ ವೇದಿಕೆ ಇದಾಗಿದ್ದು, ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಹೊಂದಬೇಕು ಎಂದರು.

Edited By : Abhishek Kamoji
Kshetra Samachara

Kshetra Samachara

26/09/2022 03:58 pm

Cinque Terre

2.64 K

Cinque Terre

0