ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಮಕ್ಕಳಲ್ಲಿರುವ ಅಪೌಷ್ಠಿಕತೆ ತೊಲಗಿಸಿ; ಚರಂತಿಮಠ

ಬಾಗಲಕೋಟೆ: ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೆ ತಂದಿರುವ ಯೋಜನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳಲ್ಲಿರುವ ಅಪೌಷ್ಟಿಕತೆ ತೊಲಗಿಸಲು ಕ್ರಮವಹಿಸುವಂತೆ ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಹಮ್ಮಿಕೊಂಡಿದ್ದ ಪೋಷಣ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರದ ಮಹತ್ವದ ಯೋಜನೆಗಳ ಲ್ಲೊಂದಾದ ಮಾತೃವಂದನಾ ಕಾರ್ಯಕ್ರಮವನ್ನು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ರೂಪಿಸಿದ್ದು, ಈ ಯೋಜನೆ ಮಹಿಳೆ ಮತ್ತು ಮಕ್ಕಳಲ್ಲಿರುವ ಅಪೌಷ್ಠಿಕತೆಯನ್ನು ಕಡಿಮೆಗೊಳಿಸಲು ಸಹಕಾರಿಯಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್ ಅವರುಪ್ರಾಸ್ತಾವಿಕವಾಗಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಗರ್ಭಿಣ ಬಾಣಂತಿಯರಿಗೆ ಸೀಮಂತ ಕಾರ್ಯ, ಅಂಗನವಾಡಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಅಣ್ಣ ಪ್ರಾಶಣ ನೀಡಲಾಯಿತು. ಅಲ್ಲದೇ ಅಂಗನವಾಡಿಗಳಿಗೆ ಮೆಡಿಶಿನ್ ಕಿಟ್‌ಗಳನ್ನು ವಿತರಿಸಲಾಯಿತು.

ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Edited By : Abhishek Kamoji
Kshetra Samachara

Kshetra Samachara

03/10/2022 04:32 pm

Cinque Terre

3.9 K

Cinque Terre

0

ಸಂಬಂಧಿತ ಸುದ್ದಿ